ಬಂಗಾಳದಲ್ಲಿ ಬಿಜೆಪಿ ಪರ್ವ ಆರಂಭ ಸಿಎಂ ಆಗಿ ಸುವೇಂದು ಪ್ರಮಾಣ ವಚನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲೇ ಮೊದಲ ಬಾರಿಗೆ ಇತಿಹಾಸ ಶುರುವಾಗಿದೆ. ಬಿಜೆಪಿ ಸರ್ಕಾರ ರಚಿಸಿದೆ. ಸುವೇಂದು ಅಧಿಕಾರಿ ಅವರು ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕರಿಸಿದ್ದು, ಈ ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್‌ ಹಾಗೂ ಎನ್‌ಡಿಎ ಆಡಳಿತದ 20 ರಾಜ್ಯಗಳ ಮುಖ್ಯಮಂತ್ರಿಗಳು ಸಾಕ್ಷಿಯಾದರು.

ಸುವೇಂದು ಅಧಿಕಾರಿ ಅವರೊಂದಿಗೆ ಇತರ ಶಾಸಕರಾದ ದಿಲೀಪ್ ಘೋಷ್, ಅಗ್ನಿಮಿತ್ರಾ ಪೌಲ್, ಅಶೋಕ್ ಕಿರ್ತನ್ಯ, ಕ್ಷುದಿರಂ ತಡು, ನಿಶಿತ್ ಪ್ರಾಮಾಣಿಕ್ ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದರು. ರಾಜ್ಯಪಾಲ ಆರ್.ಎನ್ ರವಿ ಪ್ರಮಾಣ ವಚನ ಬೋಧಿಸಿದರು.

ಈ ಸಮಾರಂಭಕ್ಕೆ ಪ್ರಧಾನಿ ಮೋದಿ ಅವರು ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ಆಗಮಿಸಿದ್ದು ವಿಶೇಷವಾಗಿತ್ತು.

ಮೊದಲಿಗೆ ಮೋದಿ ಅವರು ಜನ್ಮ ವಾರ್ಷಿಕೋತ್ಸವದ ಅಂಗವಾಗಿ ರವೀಂದ್ರನಾಥ ಟ್ಯಾಗೋರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.