ತುಮಕೂರು: ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ನಡೆದಿದೆ.
ಗೊಬ್ಬರ ತುಂಬಿದ್ದ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಆಲ್ಟೋ ಕಾರು ಛಿದ್ರ ಛಿದ್ರವಾಗಿದೆ.
ಮಂಡ್ಯದ ಕುಮಾರ ನರಸಿಂಹಸ್ವಾಮಿ ಹಾಗೂ ಅವರ ಪತ್ನಿ ಗಾಯತ್ರಿ ಹಾಗೂ ಮತ್ತೊಬ್ಬರು ಸಂಬಂಧಿ ಮಹಿಳೆ ಮತ್ತು
ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಂಡ್ಯದಿಂದ ಕುಮಾರಸ್ವಾಮಿ ಕುಟುಂಬದವರು ದೇವರಾಯನ ದುರ್ಗಕ್ಕೆ ಹೋಗಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ವಾಪಸು ಮಂಡ್ಯಾಕ್ಕೆ ಬರುತ್ತಿದ್ದರು.
ಹೊನ್ನೇನಹಳ್ಳಿ ಬಳಿ ಕುಣಿಗಲ್ ಕಡೆಯಿಂದ ಬರುತ್ತಿದ್ದ ಲಾರಿ ಕರ್ ಗೆ ಡಿಕ್ಕಿ ಹೊಡೆದಿದೆ.
ಅಪಘಾತದಿಂದಾಗಿ ಬಹಳ ಸಮಯ ಟ್ರಾಫಿಕ್ ಜಾಮ್ ಆಗಿತ್ತು.ಸ್ಥಳಕ್ಕೆ ಕುಣಿಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡರು.

