ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ರಾಜ್ಯದಲ್ಲಿ ಮದ್ಯಪಾನ ನಿಯಂತ್ರಣಕ್ಕೆ ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ದೇವಾಲಯಗಳು, ಶಾಲೆಗಳು ಮತ್ತು ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯೊಳಗೆ 717 ಸರ್ಕಾರಿ ಮದ್ಯದಂಗಡಿಗಳನ್ನು ಎರಡು ವಾರಗಳೊಳಗೆ ಮುಚ್ಚಲು ಕಡಕ್ ಆದೇಶ ನೀಡಿದ್ದಾರೆ.
ರಾಜ್ಯ ಸರ್ಕಾರದ ಅಧೀನದಲ್ಲಿರುವ ತಮಿಳುನಾಡು ಸ್ಟೇಟ್ ಮಾರ್ಕೆಟಿಂಗ್ ಕಾರ್ಪೋರೇಷನ್ ಮೂಲಕ ಈ ಮದ್ಯದಂಗಡಿಗಳು ಕಾರ್ಯನಿರ್ವಹಿಸುತ್ತಿವೆ. ಸರ್ಕಾರದ ಮಾಹಿತಿ ಪ್ರಕಾರ, ಪ್ರಸ್ತುತ ರಾಜ್ಯದಲ್ಲಿ ಒಟ್ಟು 4,765 ಟಿಎಎಸ್‌ಎಮ್‌ಎಸಿ ಅಂಗಡಿಗಳಿದ್ದು, ಅವುಗಳಲ್ಲಿ 276 ದೇವಾಲಯಗಳ ಸಮೀಪ, 186 ಶಿಕ್ಷಣ ಸಂಸ್ಥೆಗಳ ಬಳಿ ಹಾಗೂ 255 ಬಸ್ ನಿಲ್ದಾಣಗಳ ಬಳಿ ಇವೆ.
ಸಾರ್ವಜನಿಕರ ಹಿತ ಹಾಗೂ ಯುವಜನರನ್ನು ವ್ಯಸನದಿಂದ ದೂರವಿಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಮಿಳುನಾಡು ನೂತನ ಸರ್ಕಾರ ಸ್ಪಷ್ಟಪಡಿಸಿದೆ.
ನೂತನ ಮುಖ್ಯ ಮಂತ್ರಿ ವಿಜಯ್ ಅವರ ಈ ಆದೇಶಕ್ಕೆ ಅಲ್ಲಿನ ಮಹಿಳೆಯರು ಫುಲ್ ಖುಷ್.

