ಪಾಂಡವಪುರ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಾಂಡವಪುರ ಠಾಣೆ ಪೊಲೀಸರು, ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ ಸುಮಾರು 10 ಲಕ್ಷ ರೂ ಮೌಲ್ಯದ 20.640 ಕೆಜಿ ತೂಕದ ಒಣ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಟಾಟಾ ಇಂಡಿಗೋ ಕಾರನ್ನು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

