ಕಲಬುರಗಿ: ಕ್ರೂಸರ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ದಾರುಣವಾಗಿ ಮೃತಪಟ್ಟ ಘಟನೆ ಕಲಬುರ್ಗಿ
ಜಿಲ್ಲೆಯ ಚಿತ್ತಾಪೂರ ತಾಲೂಕಿನ ಲಾಡ್ಲಾಪೂರ ಬಳಿ ನಡೆದಿದೆ.
ಮೃತ ಐವರೂ ಚಿತ್ತಾಪೂರ ತಾಲೂಕಿನ ಇಂಗಳಗಿ ಗ್ರಾಮದ ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಶಾ (48), .ಮೆಹಬೂಬ್ ಅಲಿ (45), ರಸೂಲ್ ಬೀ (42), ಫಾತೀಮಾ ಅಲೀ (38) ಮೃತಪಟ್ಟ ದುರ್ದೈವಿಗಳು.
ಯಾದಗಿರಿ ಆಸ್ಪತ್ರೆಯಿಂದ ವಾಪಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾಡ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕ್ರೂಸರ್ ಗುರುತು ಸಿಗದಂತೆ ನಜ್ಜುಗುಜ್ಜಾಗಿದೆ.
ಅಪಘಾತ ಸಂಭವಿಸಿದ ಕೂಡಲೇ ಲಾರಿ ಅಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.
ಅಪಘಾತ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಕಲಬುರಗಿ ಎಸ್‌ಪಿ ಎ. ಶ್ರೀನಿವಾಸುಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

