ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಹಾಗೂ ಹೈಕಮಾಂಡ್ ನಿರ್ಧಾರಗಳ ಕುರಿತು ಭಾರೀ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಪ್ರಶ್ನೆಗಳಿಗೆ ನಾಳೆ ಉತ್ತರ ನೀಡುತ್ತೇನೆ ಎಂದು ಹೇಳಿದ್ದಾರೆ.
ಇಂದು ಮಾಜಿ ಪ್ರಧಾನಿ ಜವಹರಲಾಲ್ ನೆಹರು ಅವರ 62ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.
ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದ ಬಳಿಕ ನೆಹರು ಅವರು ದೇಶಕ್ಕೆ ನೀಡಿದ ಕೊಡುಗೆಯನ್ನು ಕೊಂಡಾಡಿದರು.
ಬಳಿಕ ಹೊರಡಲು ಅನುವಾದ ಸಿದ್ದ ರಾಮಯ್ಯ ಅವರನ್ನು ಮಾಧ್ಯಮದವರು ಸುತ್ತುವರಿದು ಪ್ರಶ್ನಿಸಿದಾಗ ಏನೇ ಇದ್ದರೂ ನಾಳೆ ಮಾತನಾಡುತ್ತೇನೆ ಎಂದು ಚುಟುಕು ಉತ್ತರ ನೀಡಿ ಹೊರಟೇ ಬಿಟ್ಟರು.

