ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪ್ರಾರ್ಥನೆಗೆ ಫಲ ಸಿಕ್ಕಿದೆ.ಅವರ ಬಹುವರ್ಷಗಳ ಕನಸು ನನಸಾಗಲು ಶುಭ ಲಗ್ನ ಸನಿಹವಾಗಿದೆ.
ಜೂ.3 ರಂದು ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇಂದು ಲೋಕಭವನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಡಿ.ಕೆ.ಶಿವಕುಮಾರ್ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.
ಸರ್ಕಾರ ರಚಿಸಲು ರಾಜ್ಯಪಾಲರು ಆಹ್ವಾನ ನೀಡಿದ್ದು, ಜೂ.3 ರಂದು ಸಂಜೆ 4.5 ಕ್ಕೆ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ರಾಜ್ಯಪಾಲರನ್ನು ಭೇಟಿ ಮಾಡಲು ಸಿದ್ದರಾಮಯ್ಯ,ಕೆ.ಸಿ.ವೇಣುಗೋಪಾಲ್,ಜಿ.ಪರಮೇಶ್ವರ್ ಸೇರಿದಂತೆ ಹಲವು ಸಚಿವರು ಸಾಥ್ ನೀಡಿದರು.

