ದಾವಣಗೆರೆ: ಡಿ.ಕೆ ಶಿವಕುಮಾರ್ ಅವರ ನೇತೃತ್ವದ ಸಚಿವ ಸಂಪುಟ ರಚನೆಯಾಗುವ ಹೊತ್ತಲ್ಲೇ ಕಾಂಗ್ರೆಸ್ ನ ಜಮೀರ್ ಅಹಮದ್ ವಿರುದ್ಧ ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದಕ್ಕೆ ಪೂರಕವಾದಂತ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದ್ದು,ಇದು ಜಮೀರ್ ಅಹಮದ್ ಅವರು ಮಾತನಾಡಿರುವುದು ಎನ್ನಲಾಗುತ್ತಿದೆ.
ಕಾಕ್ರೋಚ್ ಪಾರ್ಟಿ ಹೆಸರಿನ ಎಕ್ಸ್‌ನಲ್ಲಿ ಆಡಿಯೋ ರಿಲೀಸ್ ಆಗಿದ್ದು,ದಾವಣಗೆರೆಯ ಕಾಂಗ್ರೆಸ್ ಮುಖಂಡ ಸಿರಾಜ್ ಜೊತೆ ಜಮೀರ್ ಅಹಮ್ಮದ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ.
ಆಡಿಯೋದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸಿ ಮಾತನಾಡಲಾಗಿದೆ. ಮುಸ್ಲಿಂ ವೋಟಿಂಗ್ ಕಡಿಮೆ ಇದೆ ಹೊರಗಡೆ ಬಂದ್ರೆ ಅವರನ್ನ ನಂಬೋಕಾಗಲ್ಲ ಕಾಂಗ್ರೆಸ್‌ಗೆ ವೋಟ್ ಹಾಕುತ್ತಾರೆ. ಒತ್ತಾಯ ಮಾಡಿ ಮನೆಯಿಂದ ಕರೆತರಬೇಡಿ. ಪಕ್ಷೇತರರಿಗೆ ಎಸ್‌ಡಿಪಿಐಗೆ ವೋಟ್ ಹಾಕಲಿ ಎಂದು ಜಮೀರ್ ಅಹಮ್ಮದ್ ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಆಡಿಯೋ ಹರಿದಾಡುತ್ತಿದ್ದರೂ ಜಮೀರ್ ಈ ಬಗ್ಗೆ ತುಟಿ ಬಿಚ್ಚಿಲ್ಲ.
ಸಚಿವ ಸ್ಥಾನಕ್ಕೆ ಜಮೀರ್ ಲಾಬಿ ಮಾಡುವಾಗಲೇ ಈ ಆಡಿಯೋ ಹೊರಬಂದಿದ್ದು ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದೆ.

