ಕೋಲ್ಕತ್ತಾ: ನಕಲಿ ಸಹಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದರು.
ಮೂರು ಬಾರಿ ಮುಖ್ಯಮಂತ್ರಿಯಾಗಿದ್ದ ಮಮತಾ ಬ್ಯಾನರ್ಜಿ ಪಕ್ಷದಲ್ಲಿ ವಿಭಜನೆಗೆ ಕಾರಣವಾದ ಶಾಸಕರ ನಕಲಿ ಸಹಿ ವಿವಾದದ ತನಿಖೆಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಕೋಲ್ಕತ್ತಾದ ಮಮತಾ ಮನೆಗೆ ದಾಳಿ ನಡೆಸಿದರು.
ರಾಜ್ಯ ತನಿಖಾ ಸಂಸ್ಥೆಯ ಅಧಿಕಾರಿಗಳು, ಕಾಲಿಘಾಟ್ ಪೊಲೀಸ್ ಠಾಣೆಯ ಸಿಬ್ಬಂದಿ ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿ ಜತೆ ಮಧ್ಯಾಹ್ನ 30 ಬಿ ಹರೀಶ್ ಚಟರ್ಜಿ ಸ್ಟ್ರೀಟ್‌ನಲ್ಲಿರುವ ಪಕ್ಷದ ಕೇಂದ್ರ ಕಚೇರಿ ಮೇಲೂ ದಾಳಿ ನಡೆಸಿದರು.

