ನಾನು ಚಿನ್ನಯ್ಯನ ಜೊತೆ ಮಾತನಾಡಿದ್ದು ನಿಜ: ಪ್ರಕಾಶ್‌ ರಾಜ್‌

ಬೆಂಗಳೂರು: ಚಿನ್ನಯ್ಯನ ಜೊತೆಗೆ ಮಾತನಾಡಿದ್ದು ನಿಜ, ಆತ ನನ್ನೊಂದಿಗೆ ತಮಿಳಿನಲ್ಲಿ ಮಾತನಾಡಿದ್ದ ಎಂದು ನಟ ಪ್ರಕಾಶ್‌ ರಾಜ್‌ ಸ್ಪಷ್ಟಪಡಿಸಿದರು.

ಬೆಂಗಳೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರು ತಳುಕು ಹಾಕಿರುವ ವಿಚಾರಕ್ಕೆ ಸ್ಪಷ್ಟ ಉತ್ತರ ನೀಡಿದರು.

ಕೋರ್ಟ್ ನಲ್ಲಿ ಚಿನ್ನಯ್ಯ ಹೇಳಿಕೆ ನೀಡಿದ್ದಾನೆ. ಗಿರೀಶ್ ಮಟ್ಟಣ್ಣನವರ್‌ ಹೇಳಿದ ರೀತಿಯಲ್ಲಿ ಕೇಳಿದ್ರೆ ನಾನು ನಿನ್ನ ಅಪ್ಪಿಕೊಳ್ತಿನಿ ಅಂದಿದ್ದೆ ಅಂತ ಹೇಳಿದ್ದಾನೆ, ಕೇರಳದಿಂದ ಹಣ ಬಂದಿದೆ ಅಂತ ಹೇಳಿ, ನನ್ನ ಹೆಸರು ಉಲ್ಲೇಖ ಮಾಡಿದ್ದಾನೆ. ಆದರೆ ನಾನು ಯಾವತ್ತೂ ಧರ್ಮಸ್ಥಳಕ್ಕೆ ಹೋಗಿಲ್ಲ, ಗಿರೀಶ್ ಮಟ್ಟನವರ್‌ ಅವರನ್ನ ಭೇಟಿಯಾಗಿಲ್ಲ ಎಂದು ಪ್ರಕಾಶ್ ರಾಜ್ ತಿಳಿಸಿದರು.