ಮೈಸೂರು: ಮೈಸೂರು ನಗರದಲ್ಲಿ ರೌಡಿಗಳ ಮೇಲೆ ನಿಗಾ ವಹಿಸಿ ಅವರ ಚಟುವಟಿಕೆಗಳನ್ನು ನಿಯಂತ್ರಣದಲ್ಲಿಡಲು ಹಾಗೂ ರೌಡಿಗಳ ವಿರುದ್ಧ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಲು ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ರಚನೆ ಮಾಡಲಾಗಿದೆ.
ನಗರದ 4 ಉಪ ವಿಭಾಗಗಳು ಹಾಗೂ 18 ಪೊಲೀಸ್ ಠಾಣೆಗಳಲ್ಲಿ ಪಿಎಸ್ಐ ನೇತೃತ್ವದಲ್ಲಿ ರೌಡಿ ಪ್ರತಿಬಂಧಕ ದಳಗಳನ್ನು ರಚಿಸಲಾಗಿದೆ.
ನಗರದಲ್ಲಿ ಒಟ್ಟು 108 ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಈ ದಳಕ್ಕೆ ನಿಯೋಜಿಸಲಾಗಿದೆ. ವಿಭಾಗದ ಎಸಿಪಿ ಹಾಗೂ ಉಪ ಪೊಲೀಸ್ ಆಯುಕ್ತರು (ಕಾನೂನು ಮತ್ತು ಸುವ್ಯವಸ್ಥೆ) ಇದರ ಮೇಲುಸ್ತುವಾರಿ ವಹಿಸಲಿದ್ದಾರೆ.
ಮೈಸೂರು ನಗರದಲ್ಲಿ ರೌಡಿ ಚಟುವಟಿಕೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

