ಮೈಸೂರು: ಅಕ್ರಮ ವಲಸಿಗರ ವಿರುದ್ಧ ಕ್ರಮ ಕೈಗೊಳ್ಳುವುದು ಬಿಟ್ಟು ಹಿಂದೂ ಕಾರ್ಯಕರ್ತರ ವಿರುದ್ಧವೇ ಎಫ್ ಐ ಆರ್ ಹಾಕುವುದು ಸರಿಯಲ್ಲ ಎಂದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಮೈಸೂರಿನ ಕಾಡಾ ಕಚೇರಿಯ ಆವರಣದಲ್ಲಿರುವ ಸಂಸದರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಬಾಂಗ್ಲಾದಿಂದ ವಲಸಿಗರು ಅಕ್ರಮವಾಗಿ ನಗರ ಪ್ರವೇಶಿಸುತ್ತಿದ್ದು ಅಂಥವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸರನ್ನು ಒತ್ತಾಯಿಸಿದ್ದಾರೆ.ಆ ಸಂದರ್ಭದಲ್ಲಿ ಹಿಂದೂಪರ ಕಾರ್ಯಕರ್ತರ ವಿರುದ್ಧವೇ ಎಫ್ ಐ ಆರ್ ದಾಖಲಿಸಿದುದು ಸರಿಯಲ್ಲ ಎಂದು ಹೇಳಿದರು.
ಬಾಂಗ್ಲಾದಿಂದ ಅಕ್ರಮವಾಗಿ ಬರುವ ವಲಸಿಗರಿಂದ ಸ್ಥಳೀಯರಿಗೆ, ಕನ್ನಡಿಗರಿಗೆ ತೊಂದರೆಯಾಗುತ್ತಿದೆ ಹಾಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒಡೆಯರ್ ಒತ್ತಾಯಿಸಿದರು.
ಬಾಂಗ್ಲಾದಿಂದ ಅಕ್ರಮವಾಗಿ ಮೈಸೂರು ಪ್ರವೇಶಿಸುತ್ತಿರುವವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಯದುವೀರ್ ರಾಜ್ಯ ಸರ್ಕಾರವನ್ನು ಇದೇ ವೇಳೆ ಆಗ್ರಹಿಸಿದರು.
ಬಿಡದಿ ಟೌನ್ ಶಿಪ್ ಬಗ್ಗೆ ಕೇಳಿದ ಪ್ರಶ್ನೆಗೆ, ರಾಜ್ಯ ಸರ್ಕಾರ ಎಂದಿಗೂ ಜನಪರ ಕಾರ್ಯಗಳನ್ನು ಮಾಡುತ್ತಿಲ್ಲ, ಕೆ ಎಸ್ ಐ ಸಿ ವಿಷಯದಲ್ಲಿಯೂ ಹಾಗೆ ಮಾಡಿದೆ ಅದೇ ರೀತಿ ಮೈಸೂರಿನ ದೇವರಾಜ ಮಾರುಕಟ್ಟೆ, ಲ್ಯಾನ್ಸ್ ಡೌನ್ ಕಟ್ಟಡದ ವಿಚಾರದಲ್ಲೂ ಸರಕಾರ ಜನಪರ ಕ್ರಮವನ್ನು ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ಇದೇ ಸಂದರ್ಭದಲ್ಲಿ ಒಡೆಯರ್ ಅವರು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅರಿವು ಮೇಳವನ್ನು ಉದ್ಘಾಟಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರುಗಳಾದ ಸಂದೇಶ ಸ್ವಾಮಿ, ಫಣೀಶ, ಸುಬ್ಬಣ್ಣ ಮತ್ತಿತರರು ಉಪಸ್ಥಿತರಿದ್ದರು.

