ಮೈಸೂರು: ಹಿಂದು ಸಾಮಾಜಿಕ ಕಾರ್ಯಕರ್ತರ ವಿರುದ್ಧ ಸುಳ್ಳು ಮೋಕದ್ದಮೆ ಹೂಡಿರುವುದನ್ನು ಖಂಡಿಸಿ
ಹಿಂದು ಜಾಗರಣ ವೇದಿಕೆಯವರು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಹಿಂದು ಜಾಗರಣ ವೇದಿಕೆ
ಮೈಸೂರು ಜಿಲ್ಲೆ ವತಿಯಿಂದ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ,ರಾಜ್ಯದ ಗೃಹ ಇಲಾಖೆಯ ವೈಫಲ್ಯದ ವಿರುದ್ಧ ಘೋಷಣೆ ಕೂಗಿದರು.
ಮೈಸೂರಿನ ರೈಲ್ವೆ ನಿಲ್ದಾಣದಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂಧು ಸಾಮಾಜಿಕ ಕಾರ್ಯಕರ್ತರ ವಿರುದ್ಧ ಸುಳ್ಳು ಮೋಕದ್ದಮೆ ಹೂಡಿರುವುದನ್ನು ಈ ವೇಳೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಖಂಡಿಸಿದರು.
ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಸಮಗ್ರ ವಿಚಾರಣೆಗೆ ಒಳಪಡಿಸದೆ ಪೊಲೀಸ್ ರಾಣಿಯಿಂದ ಬಿಡುಗಡೆ ಮಾಡಿರುವ ಪೊಲೀಸ್ ಅಧಿಕಾರಿಗಳ ಕ್ರಮವನ್ನು ವಿರೋಧಿಸಿದರು
ರಾಜ್ಯದ ಗೃಹ ಇಲಾಖೆಯ ವೈಫಲ್ಯದ ವಿರುದ್ಧ ಧ್ವನಿ ಎತ್ತಲು ಈ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ಕಾರ್ಯಕರ್ತರು ಆಗ್ರಹಿಸಿದರು.

