(ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ)
ಚಾಮರಾಜನಗರ: ಚಾಮರಾಜನಗರ ಜಿಲ್ಲಾ ನ್ಯಾಯಾಲಯಕ್ಕೆ ಇಂದೂ ಕೂಡ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು,ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು
ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಜಿಲ್ಲಾ ನ್ಯಾಯಾಲಯದ ಅಧಿಕೃತ ಇ-ಮೇಲ್ ವಿಳಾಸಕ್ಕೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಚಾಮರಾಜನಗರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.
ಬೆದರಿಕೆ ಸಂದೇಶದ ಹಿನ್ನೆಲೆಯಲ್ಲಿ ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ನ್ಯಾಯಾಲಯದ ಆವರಣವನ್ನು ಸಂಪೂರ್ಣವಾಗಿ ತಪಾಸಣೆ ನಡೆಸಿದರು.
ಕಳೆದ ಎರಡು-ಮೂರು ದಿನಗಳ ಅಂತರದಲ್ಲಿ ಇದೇ ರೀತಿ ಮತ್ತೊಂದು ಬೆದರಿಕೆ ಇ-ಮೇಲ್ ಬಂದಿತ್ತು,ನಂತರ ಶನಿವಾರ ಕೂಡ ಮೇಲ್ ಬಂದಿದ್ದು ಆತಂಕಕ್ಕೆ ಕಾರಣವಾಗಿದೆ.
ಇದು ಹುಸಿ ಬಾಂಬ್ ಬೆದರಿಕೆ ಈ ಮೇಲ್ ಸಂದೇಶ ಎಂಬುದು ಸ್ಪಷ್ಟವಾಗಿದೆ.
ಇಂದು ಬೆದರಿಕೆ ಹಿನ್ನಲೆಯಲ್ಲಿ ನ್ಯಾಯಾಲಯದಲ್ಲಿದ್ದ ವಕೀಲರು ಹಾಗೂ ಸಾರ್ವಜನಿಕರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಹೊರಗೆ ಕಳುಹಿಸಲಾಯಿತು.
ಪ್ರಸ್ತುತ ಶ್ವಾನದಳ ಬಾಂಬ್ ನಿಷ್ಕ್ರಿಯ ದಳದವರು ತಪಾಸಣೆ ನಡೆಸಿದ ನಂತರ ಹುಸಿ ಕರೆ ಎಂಬುದು ದೃಢಪಟ್ಟಿದೆ.ನಂತರ ಎಂದಿನಂತೆ ಕಲಾಪಗಳು ನಡೆಯುತ್ತಿವೆ.
ವಾರದಲ್ಲಿ ನ್ಯಾಯಾಲಯಕ್ಕೆ ಮೂರನೆ ಮೇಲ್ ಸಂದೇಶ ಬಂದಿದ್ದರಿಂದ ಎಲ್ಲೆಡೆ ಒಂದು ರೀತಿ ಭಯದ ವಾತಾವರಣ ನಿರ್ಮಾಣವಾಗಿತ್ತು.

