ಮೈಸೂರು: ಜಮೀನು ಪೋಡಿ ಹಾಗೂ ದುರಸ್ತಿ ಮಾಡಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಒಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.
ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು, ಚಿಕ್ಕಯ್ಯನಛತ್ರ ಹೋಬಳಿ ಕೇಂದ್ರದ ಸರ್ವೆಯರ್ ಜಯಪ್ರಕಾಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕಡಕೊಳದ ನಾರಾಯಣ ಎಂಬುವರಿಗೆ ಸೇರಿದ 9 ಗುಂಟೆ ಜಮೀನು ಪೋಡಿ, ದುರಸ್ತಿ ಮಾಡಲು 2 ಲಕ್ಷಕ್ಕೆ ಡೀಲ್ ಮಾಡಿಕೊಂಡಿದ್ದರು.
ಮುಂಗಡವಾಗಿ ನಾರಾಯಣ 80 ಸಾವಿರ ನೀಡಿದ್ದರು. ಉಳಿದ 1.20 ಲಕ್ಷ ಹಣ ನೀಡುವಂತೆ ಜಯಪ್ರಕಾಶ್ ಒತ್ತಾಯಿಸಿದ್ದರು. ಅಧಿಕಾರಿಯ ವರ್ತನೆಗೆ ಬೇಸತ್ತಿದ್ದ ನಾರಾಯಣ್ ಲೋಕಾಯುಕ್ತ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದರು.
ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ಲಂಚದ ಹಣ ಪಡೆಯುವ ವೇಳೆ ದಾಳಿ ನಡೆಸಿದ ಪೊಲೀಸರಿಗೆ ಸರ್ವೆಯರ್ ಜಯಪ್ರಕಾಶ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು,
ನಂಜನಗೂಡು ತಾಲೂಕು ಕಚೇರಿಯಲ್ಲಿ ಆರೋಪಿಯನ್ನ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

