ಮೈಸೂರು: ತಮಿಳುನಾಡಿಗೆ ಮುಂದಿನ 15 ದಿನ ನಿತ್ಯ 3,500 ಕ್ಯೂಸೆಕ್ ನೀರು ಹರಿಸಬೇಕೆಂದು ಶಿಫಾರಸು ಮಾಡಿರುವ ಕಾವೇರಿ ನೀರು ನಿಯಂತ್ರಣ ಮಂಡಳಿ ಸೂಚನೆ ಖಂಡಿಸಿ ಇಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.
ಮೈಸೂರಿನ ಹಳೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕರ್ನಾಟಕ ಸೇನಾ ಪಡೆ ಸದಸ್ಯರು ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ಧ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಈ ವರ್ಷ ಬರಗಾಲ ಘೋಷಣೆ ಮಾಡಲಾಗಿದೆ,ನಮಗೆ ಕುಡಿಯಲು ನೀರಿಲ್ಲ, ರಾಜ್ಯದ ರೈತರು ಕಾಡಿಬೇಡಿದರೂ ಸರ್ಕಾರ ನೀರು ಬಿಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಈ ಕಾವೇರಿ ನೀರು ನಿರ್ವಹಣಾ ಮಂಡಳಿಯನ್ನೇ ರದ್ದು ಮಾಡಬೇಕು. ಹಾಗೂ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಒಂದು ಹನಿ ನೀರೂ ಬಿಡಬಾರದು ಎಂದು ಒತ್ತಾಯಿಸಿದರು.
ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ವಹಿಸಿದ್ದರು. ಪ್ರಭುಶಂಕರ್, ಗೋಲ್ಡನ್ ಸುರೇಶ್, ಸಿದ್ದೇಗೌಡ, ಗಿರೀಶ್, ಸೋಮೇಗೌಡ, ಸಿಂದುವಳ್ಳಿ ಶಿವಕುಮಾರ್, ರಾಧಾಕೃಷ್ಣ, ಮಂಜುಳಾ,ತಾಯೂರು ಗಣೇಶ್, ಡಾ . ನಾಗೇಂದ್ರ, ಚಂದ್ರಶೇಖರ್, ಸುನೀಲ್, ರಮೇಶ್, ಶಿವಲಿಂಗಯ್ಯ, ಹನುಮಂತಯ್ಯ , ನಾರಾಯಣ ಗೌಡ, ಶಿವರಾಂ, ಮಲ್ಲೇಶ್, ಹೊನ್ನೇಗೌಡ, ವಿಜಯೇಂದ್ರ ಸೇರಿದಂತೆ ಹಲವಾರು ಮಂದಿ ಪಾಲ್ಗೊಂಡಿದ್ದರು.

