ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಸಂಜೆ ಹೃದಯಘಾತದಿಂದ ನಿಧನರಾಗಿದ್ದಾರೆ.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಚೆನ್ನಮ್ಮ ಅವರನ್ನ ಕಳೆದ 4 ದಿನಗಳ ಹಿಂದಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವೈದ್ಯರು ತೀವ್ರ ನಿಗಾಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 4:50 ರ ಸುಮಾರಿಗೆ ಚೆನ್ನಮ್ಮ ಅವರು ವಿಧಿವಶರಾಗಿದ್ದಾರೆ.
ಹಾಸನ ತಾಲೂಕಿನ ಶಾಂತಿ ಗ್ರಮದ ಬಳಿ ಇರುವ ಮುತ್ತಿಗೆ ಹಿರೇಹಳ್ಳಿಯಲ್ಲಿ ಚೆನ್ನಮ್ಮ ಅವರು 1954 ಮೇ 25 ರಂದು ಹೆಚ್.ಡಿ ದೇವೇಗೌಡರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ದಂಪತಿಗೆ 6 ಜನ ಮಕ್ಕಳಿದ್ದಾರೆ. ಪತಿ ಹೆಚ್.ಡಿ ದೇವೇಗೌಡ, ಪುತ್ರ ಹೆಚ್.ಡಿ ಕುಮಾರಸ್ವಾಮಿ, ಹೆಚ್.ಡಿ ರೇವಣ್ಣ, ಹೆಚ್.ಡಿ. ಬಾಲಕೃಷ್ಣ, ಹೆಚ್.ಡಿ. ರಮೇಶ್ ಹಾಗೂ ಮಗಳು ಹೆಚ್.ಡಿ. ಅನುಸೂಯ ಮತ್ತು ಮೊಮ್ಮಕ್ಕಳು,ಸೊಸೆಯಂದಿರು,ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಚೆನ್ನಮ್ಮ ಅವರ ಅಂತಿಮ ಸಂಸ್ಕಾರವನ್ನು ನಾಳೆ ದೇವೇಗೌಡರ ಊರು ಹರದನಹಳ್ಳಿಯಲ್ಲಿ ನೆರವೇರಿಸಲಾಗುತ್ತದೆ.
ಸಂತಾಪ: ಚೆನ್ನಮ್ಮ ದೇವೇಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ,ಸಿಎಂ ಡಿ.ಕೆ.ಶಿವಕುಮಾರ್,ಮಾಜಿ ಸಿಎಂ ಗಳಾದ ಸಿದ್ದ ರಾಮಯ್ಯ, ಬಿ.ಎಸ್.ಯಡಿಯೂರಪ್ಪ,ಬಸವರಾಜ ಬೊಮ್ಮಾಯಿ,ಜಗದೀಶ್ ಶಟ್ಟರ್,ಪ್ರತಿಪಕ್ಷದ ನಾಯಕ ಆರ್.ಅಶೋಕ್,ಸಂಸದ ಯದುವೀರ ಕೃಷ್ಣದತ್ತ ವಾಮರಾಜ ಒಡೆಯರ್,ದೇವೇಗೌಡರ ಮಾನಸ ಪುತ್ರ ಎಂದೇ ಕರೆಯುವ ವೈ ಎಸ್ ವಿ ದತ್ತ,ಮಾಜಿ ಸಚಿವ ಹೆಚ್.ವಿಶ್ವನಾಥ್ ಸೇರಿದಂತೆ ಪಕ್ಷಾತೀತವಾಗಿ ರಾಜನೀಯಕರು ಕಂಬನಿ ಮಿಡಿದಿದ್ದಾರೆ.

