ಬೆಂಗಳೂರು: ಅಂತೂ ಇಂತೂ 19 ಶಾಸಕರು ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟಕ್ಕೆ ಸಚಿವರಾಗಿ ಸೇರ್ಪಡೆ ಯಾಗಿದ್ದು, ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಮೊದಲಿಗೆ ಮಾಜಿ ಸಿಎಂ ದಿವಂಗತ ಧರ್ಮಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ ಅವರು ಪ್ರಮಾಣವಚನ ಸ್ವೀಕರಿಸಿದರು.
ನಂತರ ಕ್ರಮವಾಗಿ ಹೆಚ್.ಸಿ.ಬಾಲಕೃಷ್ಣ, ಕೆ.ಎಸ್.ಬಸವಂತಪ್ಪ, ಬಸವರಾಜ್ ರಾಯರೆಡ್ಡಿ, ಎನ್.ಚಲುವರಾಯಸ್ವಾಮಿ, ಲಕ್ಷ್ಮಣ್ ಸವದಿ, ಮಧು ಬಂಗಾರಪ್ಪ, ಎಸ್.ಎಸ್.ಮಲ್ಲಿಕಾರ್ಜುನ್, ಬಿ.ನಾಗೇಂದ್ರ, ಪಿ.ಎಂ.ನರೇಂದ್ರಸ್ವಾಮಿ, ಸಿ.ಪುಟ್ಟರಂಗಶೆಟ್ಟಿ, ಟಿ.ರಘುಮೂರ್ತಿ, ರಿಜ್ವಾನ್ ಅರ್ಷದ್, ರುದ್ರಪ್ಪ ಲಮಾಣಿ, ಸಂತೋಷ್ ಲಾಡ್, ಶಿವಲಿಂಗೇಗೌಡ, ಶಿವರಾಜ್ ತಂಗಡಗಿ, ವಿಜಯಾನಂದ ಕಾಶಪ್ಪನವರ್, ಜಮೀರ್ ಅಹ್ಮದ್ ಖಾನ್ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು.
ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ನೂತನ ಸಚಿವರ ಬೆಂಬಲಿಗರು ಜಯಕಾರ ಹಾಕುತ್ತಿದ್ದರು.
ವಿಶೇಷವೆಂದರೆ ಈ ಸಮಾರಂಭಕ್ಕೆ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಗೈರಾಗಿದ್ದುದು ಎದ್ದು ಕಾಣುತ್ತಿತ್ತು.
ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್, ಸೇರಿದಂತೆ ಹಲವು ಸಚಿವರು ಹಾಜರಿದ್ದರು.

