ನೀಟ್‌ ಹೋರಾಟ:ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನವದೆಹಲಿ: ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಡೆಯುತ್ತಿದ್ದ ರಾಷ್ಟ್ರವ್ಯಾಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಾರ್ಟಿ ನಡುವೆ ಇಂದು 3ನೇ ಸುತ್ತಿನ ಮಾತುಕತೆ ನಡೆಯುವ
ಮೊದಲೇ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಿದ್ದು,ಕಾಂಗ್ರೆಸ್ ಹಾಗೂ ಸಿಜೆಪಿ ಮತ್ತು ಪ್ರತಿಭಟನಾಕಾರರು ಇದನ್ನು ಸ್ವಾಗತಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದ 2 ಪುಟಗಳ ರಾಜೀನಾಮೆ ಪತ್ರವನ್ನು ಧರ್ಮೇಂದ್ರ ಪ್ರಧಾನ್‌ ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ರಾಷ್ಟ್ರವಿರೋಧಿ ಶಕ್ತಿಗಳು ಗೊಂದಲ ಸೃಷ್ಟಿಸಲು ಮತ್ತು ತಮ್ಮ ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳದಂತೆ ತಡೆಯುವ ಉದ್ದೇಶದಿಂದ ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ದೇಶದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ ಎಂದು ಪತ್ರದಲ್ಲಿ ಪ್ರಧಾನ್ ತಿಳಿಸಿದ್ದಾರೆ.