ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಉಂಟಾದ ಪ್ರತಿಭಟನೆ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುತ್ತಿದ್ದಂತೆ ಪ್ರಹ್ಲಾದ್ ಜೋಶಿ ಅವರನ್ನು ಶಿಕ್ಷಣ ಸಚಿವರಾಗಿ ನೇಮಿಸಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.
ಪ್ರಧಾನ್ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದ್ದು,ರಾಷ್ಟ್ರಪತಿಗಳ ಕಚೇರಿ ಜೋಶಿ ಅವರ ನೇಮಕಾತಿಯನ್ನು ದೃಢಪಡಿಸಿದೆ.
ಜೋಶಿ ಪ್ರಸ್ತುತ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿದ್ದು,ಇದೀಗ ಶಿಕ್ಷಣ ಸಚಿವರಾಗಿಯೂ ಹೆಚ್ಚಿನ ಜವಾಬ್ದಾರಿ ನಿಬಾಯಿಸಬೇಕಿದೆ.

