ನವದೆಹಲಿ: ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಪರೀಕ್ಷಾ ಅಕ್ರಮ ತಡೆ ಮಸೂದೆ ಅಂಗೀಕಾರವಾಗಿದೆ. ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀಕಾರ ಮಾಡಲಾಯಿತು.
ವಿಪಕ್ಷಗಳ ಗದ್ದಲ, ಕೋಲಾಹಲದ ನಡುವೆ ಮಸೂದೆ ಅಂಗೀಕರಿಸಲಾಯಿತು.
ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಮಸೂದೆಯ ಅಂಗೀಕಾರದ ಬಗ್ಗೆ ಅಧಿಕೃತವಾಗಿ ಘೋಷಿಸಿದ್ದಾರೆ.
ಈ ಮಸೂದೆಯು ರಾಜ್ಯಸಭೆಯಲ್ಲಿ ಚರ್ಚೆಗೆ ಬಂದು ಅಲ್ಲಿ ಅಂಗೀಕೃತವಾದ ನಂತರ ರಾಷ್ಟ್ರಪತಿಗಳ ಅಂಕಿತ ಪಡೆದು ಕಾನೂನಿನ ರೂಪ ಪಡೆಯಲಿದೆ.

