ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಏನು ಹೇಳುತ್ತದೆಯೋ ಹಾಗೆ ನಾವು ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಈ ಕುರಿತು ಪ್ರತಿಕ್ರಿಯಿಸಿ,ಕಾನೂನು ಹೇಳಿದಂತೆ ನಡೆಯುತ್ತೇವೆ ಎಂದು ತಿಳಿಸಿದರು.
ಮಾಜಿ ಸಿಎಂ ಕುಮಾರಸ್ವಾಮಿ ಅವರು ನೈಸ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದ ಬಗ್ಗೆ ಕೇಳಿದಾಗ, ಅವರು ಪತ್ರ ಬರೆದಿರುವುದು ನಿಜ.ಆದರೆ ಪತ್ರ ಇನ್ನು ಓದಿಲ್ಲ. ಓದಿ, ವಿಚಾರ ತಿಳಿದು ಕಾನೂನಿನ ಚೌಕಟ್ಟಿನಲ್ಲಿ ಮಾಡಬಹುದಾದ ಕೆಲಸಗಳ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದು ಸಿಎಂ ಹೇಳಿದರು.

