ಮೈಸೂರು: ಮಯೂರ ಕನ್ನಡ ಯುವಕರ ಬಳಗದ ವತಿಯಿಂದ ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಚಾಮುಂಡೇಶ್ವರಿ ಅತಿಥಿ ಗೃಹದಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ದತೆ ಮತ್ತು ಭಾವೈಕ್ಯತೆಯ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಹಿಂದೂ ಹಾಗೂ ಮುಸ್ಲಿಂ ಬಾಂಧವರು ಒಟ್ಟಾಗಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು. ಬಳಿಕ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಹಿಂದೂ ಬಾಂಧವರು ಮುಸ್ಲಿಂ ಸಮುದಾಯದವರಿಗೆ ಈದ್ ಮಿಲಾದ್ ಹಬ್ಬದ ಶುಭಾಶಯಗಳನ್ನು ಕೋರಿ, ಸೌಹಾರ್ದತೆ, ಸಹಬಾಳ್ವೆ ಹಾಗೂ ರಾಷ್ಟ್ರೀಯ ಏಕತೆಯ ಮಹತ್ವವನ್ನು ಪ್ರತಿಪಾದಿಸಿದರು.
ಕಾರ್ಯಕ್ರಮದಲ್ಲಿ ಎರಡೂ ಸಮುದಾಯಗಳ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಭಾವೈಕ್ಯತೆಯ ಸಂದೇಶವನ್ನು ಸಮಾಜಕ್ಕೆ ಸಾರಿದರು.
ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಜಿ ರಾಘವೇಂದ್ರ,ಉತ್ತನಹಳ್ಳಿ ಶಿವಣ್ಣ,ಕನಕ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ರವಿಚಂದ್ರ, ದಿನೇಶ್, ಎಸ್ ಎನ್ ರಾಜೇಶ್, ಯತೀಂದ್ರ,
ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮೈನಾರಿಟಿ ಅಧ್ಯಕ್ಷರಾದ ಆರಿಫ್ ಪಾಷಾ,
ಗುಲ್ಶನ್ ಪಾಷಾ, ಶಾಹಿದ್, ಮಹಮ್ಮದ್ ವಾಸಿಮ್, ಮಹಮ್ಮದ್ ಯೂನಿಸ್, ಮೊಹಮ್ಮದ್ ಜನ್ನೀದ್, ಪರ್ಕನ್, ಅಲ್ತಾಫ್, ಅಪ್ರೋಜ್, ಶಭಾಷ್ ಮತ್ತಿತರರು ಹಾಜರಿದ್ದು ಶುಭ ಕೋರಿದರು.

