ಸಾರ್ವಜನಿಕ ಗಣಪತಿ ವಿಸರ್ಜನಾ: ಎಲ್ಲರ ಸಹಕಾರ ಅಗತ್ಯ-ಎಲ್.ನಾಗೇಂದ್ರ

ಮೈಸೂರು: ಸಾರ್ವಜನಿಕ ಗಣಪತಿ ಉತ್ಸವ ಅಂಗವಾಗಿ ಆಯೋಜಿಸಲಾಗಿರುವ ಸಾರ್ವಜನಿಕ ಗಣಪತಿ ವಿಸರ್ಜನಾ ಬಿತ್ತಿಪತ್ರವನ್ನು ಮೈಸೂರು ನಗರ ಬಿಜೆಪಿ ಅಧ್ಯಕ್ಷರಾದ ಎಲ್. ನಾಗೇಂದ್ರ ಅವರು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಲ್. ನಾಗೇಂದ್ರ ಅವರು, ಗಣಪತಿ ಹಬ್ಬವು ನಮ್ಮ ನಾಡಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿದ್ದು, ಸಾರ್ವಜನಿಕ ಗಣಪತಿ ವಿಸರ್ಜನಾ ಕಾರ್ಯಕ್ರಮವನ್ನು ಭಕ್ತಿ, ಶ್ರದ್ಧೆ ಹಾಗೂ ಸೌಹಾರ್ದಯುತವಾಗಿ ಆಚರಿಸಬೇಕು ಎಂದು ಕರೆ ನೀಡಿದರು.

ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಜೊತೆಗೆ ಪರಿಸರ ಸಂರಕ್ಷಣೆ, ಶಿಸ್ತು ಮತ್ತು ಸುರಕ್ಷತೆಗೆ ಆದ್ಯತೆ ನೀಡಿ, ಸಂಬಂಧಪಟ್ಟ ಇಲಾಖೆಗಳ ಮಾರ್ಗಸೂಚಿಗಳನ್ನು ಪಾಲಿಸುವಂತೆ ಅವರು ಮನವಿ ಮಾಡಿದರು.

ಸಾರ್ವಜನಿಕ ಗಣಪತಿ ವಿಸರ್ಜನಾ ಕಾರ್ಯಕ್ರಮವು ಭವ್ಯವಾಗಿ ಹಾಗೂ ಶಾಂತಿಯುತವಾಗಿ ನಡೆಯಲು ಎಲ್ಲರ ಸಹಕಾರ ಅಗತ್ಯ ಎಂದು ಎಲ್.ನಾಗೇಂದ್ರ ತಿಳಿಸಿದರು.

ಈ ಸಂದರ್ಭದಲ್ಲಿ ಗಿರಿಧರ್,ಮುರುಳಿ ಜೋಗಿಮಂಜು,ಸ್ಮಾರ್ಟ್ ಮಂಜು,ವೇಲು,ವಿಕ್ರಮ್ ಅಯ್ಯಂಗಾರ್,ಮಂಜಪ್ಪ, ಆನಂದ್ ಹಾಗೂ ಗಣಪತಿ ಉತ್ಸವ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.