ಮೈಸೂರು: ಅನಿಯಮಿತ ಲೋಡ್ ಶೆಡ್ಡಿಂಗ್ ವಿರೋಧಿಸಿ ರೈತರು ಮೈಸೂರಿನ ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ನಗರದ ಹಿನಕಲ್ ನಲ್ಲಿರುವ ಚೆಸ್ಕಾಂ ಕಚೇರಿಗೆ ಪ್ರತಿಭಟನಾ ನಿರತ ರೈತರು ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ರೈತರನ್ನು ತಡೆಯಲು ಯತ್ನಿಸಿದರು. ಈ ವೇಳೆ ಗೇಟ್ ತಳ್ಳಿ ಕಚೇರಿ ಆವರಣ ಪ್ರವೇಶಿಸಿದ ರೈತರು ಅಲ್ಲೇ ಕುಳಿತು ಧರಣಿ ನಡೆಸಿದರು.
ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದ್ದು, ಕೂಡಲೇ ಲೋಡ್ ಶೆಡ್ಡಿಂಗ್ ನಿಲ್ಲಿಸುವಂತೆ ಆಗ್ರಹಿಸಿದರು.

