ಹುಲಿ ದಾಳಿಗೆ ವ್ಯಕ್ತಿ ಬಲಿ

ಚಾಮರಾಜನಗರ: ಹುಲಿ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಬಸವಣ್ಣ(65) ಮೃತಪಟ್ಟ ದುರ್ದೈವಿ.

ಈತ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಹುಲಿ ಏಕಾಏಕಿ ದಾಳಿ ನಡೆಸಿ ದೇಹದ ಒಂದು ಭಾಗ ತಿಂದು, ಬಳಿಕ ಸಮೀಪದಲ್ಲೇ ಇದ್ದ ಕಬ್ಬಿನ ತೋಟಕ್ಕೆ ಎಳೆದುಕೊಂಡು ಹೋಗಿದೆ ಎನ್ನಲಾಗಿದೆ.

ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಜಮೀನಿಗೆ ತೆರಳಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ವಿಚಾರ ತಿಳಿದು ಸ್ಥಳಕ್ಕೆ ಪೊಲೀಸ್‌ ಇಲಾಖೆ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದರು.

ವಿಚಾರ ತಿಳಿದು ಸ್ಥಳಕ್ಕೆ ಪೊಲೀಸ್‌ ಇಲಾಖೆ ಅಧಿಕಾರಿಗಳು ಆಗಮಿಸಿದ್ದಾರೆ. ಆದರೆ, ಅರಣ್ಯ ಇಲಾಖೆ ಅಧಿಕಾರಿಗಳು ಈವರೆಗೂ ಬಂದಿಲ್ಲ ಎಂದು ಮೃತರ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಹಿರಿಯ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿದರೆ ಸ್ವಿಚ್‌ ಆಫ್ ಬರುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.