ಬೆಂಗಳೂರು: ವಿಧಾನ ಮಂಡಲ ಅಧಿವೇಶನದಲ್ಲಿ ಬರಗಾಲ ಹಾಗೂ ಕಸ್ತೂರಿ ರಂಗನ್ ವರದಿ ಕುರಿತು ಚರ್ಚೆ ನಡೆಯಲಿದೆ
ಎಂದು ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ನೂತನವಾಗಿ ಜಿಲ್ಲಾ ಅಧ್ಯಕ್ಷರು ನೇಮಕಗೊಂಡಿದ್ದು, ಅವರಿಗೆ ಮಾರ್ಗದರ್ಶನ ನೀಡಲು ಹೈಕಮಾಂಡ್ ನಾಯಕರು ಸಭೆ ಕರೆದಿದ್ದಾರೆ ಎಂದು ಹೇಳಿದರು.
ಸದಾಶಿವನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುರ್ಜೇವಾಲ ಅವರು ಆಗಮಿಸಿದ್ದಾರೆ,ಜಿಲ್ಲಾ ಅಧ್ಯಕ್ಷರುಗಳಿಗೆ ಸಲಹೆ ಸೂಚನೆ,ಮಾರ್ಗದರ್ಶನ ನೀಡಲಿದ್ದಾರೆ ಎಂದು ಹೇಳಿದರು.
ನಾನು ಇಂದಿನಿಂದ ಮೂರುದಿನಗಳು ಜಿಲ್ಲೆಗಳಲ್ಲಿ ಬರಪರಿಶೀಲನೆ ಮಾಡುತ್ತೇನೆ ಎಂದು ಸಿಎಂ ತಿಳಿಸಿದರು.

