ಬೆಂಗಳೂರು: ನಮ್ಮ ಭಾರತೀಯ ಚಿತ್ರರಂಗದ ಅತ್ಯುನ್ನತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಕನ್ನಡದ ಖ್ಯಾತ ಹಿರಿಯ ನಟ ಅನಂತನಾಗ್ ಭಾಜನರಾಗಿದ್ದಾರೆ.
ಡಾ. ರಾಜ್‌ಕುಮಾರ್ ಅವರ ಬಳಿಕ ಈ ಅತ್ಯುನ್ನತ ಗೌರವಕ್ಕೆ ಅನಂತ್ ನಾಗ್ ಅವರು ಪಾತ್ರರಾಗಿದ್ದಾರೆ.
2024ನೇ ಸಾಲಿನ ಈ ಗೌರವಕ್ಕೆ ಅನಂತನಾಗ್ ಅವರನ್ನು ಆಯ್ಕೆ ಮಾಡಲಾಗಿದ್ದು, ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಈ ಕುರಿತು ಅಧಿಕೃತವಾಗಿ ಪ್ರಕಟಿಸಿದೆ.
ಐದು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಶ್ರಮಿಸಿರುವ ಅನಂತನಾಗ್ ಅವರು ಕನ್ನಡ, ಹಿಂದಿ, ಮರಾಠಿ ಸೇರಿದಂತೆ ಹಲವು ಭಾಷೆಗಳ 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
ಕಲಾತ್ಮಕ ಮತ್ತು ವಾಣಿಜ್ಯ ಮಾದರಿಯ ಚಿತ್ರಗಳಲ್ಲಿ ತಮ್ಮ ನೈಜ ಅಭಿನಯದ ಮೂಲಕ ಕೋಟ್ಯಂತರ ಅಭಿಮಾನಿಗಳ ಮನ ಗೆದ್ದಿರುವ ಅವರಿಗೆ ಪಾಲ್ಕೆ ಪ್ರಶಸ್ತಿ ಒಲಿದಿರುವುದು ಕನ್ನಡ ಚಿತ್ರರಂಗಕ್ಕೆ ಹಾಗೂ ಕನ್ನಡಿಗರಿಗೆ ದೊರೆತ ಹೆಮ್ಮೆ.
ಗುಜರಾತ್‌ನ ಏಕತಾ ನಗರದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನಂತನಾಗ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

