ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ನಗರ ಕಚೇರಿಯಲ್ಲಿ ದೀಪ ಪ್ರಜ್ವಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 17ರವರೆಗೆ ಒಂದು ತಿಂಗಳು ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅದರ ಭಾಗವಾಗಿ ಕಚೇರಿಯಲ್ಲಿ ಗಣಪತಿಗೆ ಪೂಜೆ ಸಲ್ಲಿಸಿ 105 ದೀಪಗಳನ್ನು ಬೆಳಗಿಸಿ ಪ್ರಧಾನಿ ಶತಾಯುಷಿಗಳಾಗಿ, ಆರೋಗ್ಯವಂತರಾಗಿರಲಿ ಎಂದು ಪ್ರಾರ್ಥಿಸಲಾಯಿತು.
ಈ ವೇಳೆ ಮಾತನಾಡಿದ ಮಾಜಿ ಶಾಸಕ ಹಾಗೂ ನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್. ನಾಗೇಂದ್ರ, ಮೋದಿ ಅವರು 76 ವರ್ಷ ಪೂರೈಸಿ 77ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ, ಕಳೆದ 25 ವರ್ಷಗಳಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ಮತ್ತು ಮೂರನೇ ಬಾರಿ ಪ್ರಧಾನಿಯಾಗಿ ಒಂದು ದಿನವೂ ರಜೆ ತೆಗೆದುಕೊಳ್ಳದೆ ದೇಶದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಬಡವರು, ದಲಿತರು, ಹಿಂದುಳಿದ ವರ್ಗಗಳ ಏಳಿಗೆಗೆ ನೂರಾರು ಯೋಜನೆಗಳನ್ನು ರೂಪಿಸಿದ್ದಾರೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಕೆ. ವಸಂತ್ ಕುಮಾರ್ ಮಾತನಾಡಿ, ಮೋದಿ ಅವರ ಕಾರ್ಯ ವೈಖರಿಯಿಂದ ಭಾರತ ಇಂದು ವಿಶ್ವ ಭೂಪಟದಲ್ಲಿ ಗೌರವಯುತ ಸ್ಥಾನ ಪಡೆದಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಸೋಮ ಸುಂದರ್, ವಿಭಾಗ ಪ್ರಭಾರಿ ಸ್ವಾಮಿ, ಮರಣಪುರ, ಮೈಪುರ ರಾಜೇಶ್, ಜೋಗಿ ಮಂಜು, ನಂದನ್ ಕುಮಾರ್, ಕಿರಣ್, ಜಯರಾಮೇಗೌಡ, ಚೇತನ್, ಕಾರ್ತಿಕ್, ಮರಿಯಪ್ಪ, ಸುಪ್ರೀತ್, ರಾಕೇಶ್, ಮಂಜುನಾಥ್, ಶಿವರಾಜ್, ರಶ್ಮಿ, ಕಾವೇರಿ, ಲೀಲಾ ಶೆಣೈ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

