ನವದೆಹಲಿ: ದೇಶಾದ್ಯಂತ ಭಾರೀ ಸದ್ದು ಮಾಡಿದ್ದ ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಹಾಗಾಗಿ ಸೌಜನ್ಯ ಅವರ ತಾಯಿ ಕುಸುಮಾವತಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಮರು ತನಿಖೆಗೆ ಮನವಿ ಮಾಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ನಂತರ ಕುಸುಮಾವತಿ ಅವರು ಸುಪ್ರೀಂ ಕೋರ್ಟ್‌ಗೆ ವಿಶೇಷ ಮನವಿ ಸಲ್ಲಿಸಿದ್ದರು.
ತಿಂಗಳ ಹಿಂದೆ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸಂಜಯ್‌ಕುಮಾರ್ ಪೀಠ ತೀರ್ಪು ಕಾಯ್ದಿರಿಸಿತ್ತು.
ಈಗ ಸರ್ವೋಚ್ಚ ನ್ಯಾಯಾಲಯ ಮರು ತನಿಖೆಗೆ ಆದೇಶಿಸಿದ್ದು, ಹೊಸ ಎಸ್‌ಐಟಿ ರಚಿಸಿ ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸುವಂತೆ ಆದೇಶ ನೀಡಿದೆ.
ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳನ್ನು ಹೊಸ ತನಿಖೆಯಲ್ಲಿ ಸೇರಿಸದಂತೆಯೂ ಸುಪ್ರೀಂ ಕೋರ್ಟ್ ಸೂಚಿಸಿದೆ.

