ಮೈಸೂರು: 2026 ರ ಮೈಸೂರು ದಸರಾ ಅಂಗವಾಗಿ ಇದೇ ಮೊದಲ ಬಾರಿಗೆ ದಸರಾ ಕಂಬಳ ಕ್ರೀಡಾಕೂಟ ಆಯೋಜಿಸಲಾಗಿದ್ದು ನೋಂದಣಿ ಪ್ರಾರಂಭವಾಗಿದೆ.
ನಗರದ ಸಾತಗಳ್ಳಿ ಹೊರವರ್ತುಲ ರಸ್ತೆಯಲ್ಲಿರುವ ವಿಟಿಯು ಪ್ರಾದೇಶಿಕ ಕೇಂದ್ರದ ಸಮೀಪ ಈ ಕ್ರೀಡಾಕೂಟ ನಡೆಯಲಿದೆ.
ಕಂಬಳದ ಕೋಣಗಳ ಮಾಲೀಕರು ಮತ್ತು ಕೋಣಗಳನ್ನು ಓಡಿಸುವ ಜಾನಪದ ವೀರರು ವಿವಿಧ ಸ್ಪರ್ಧಾ ವಿಭಾಗಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾ ಕಂಬಳ ಉಪ ಸಮಿತಿ ಕಾರ್ಯಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದು,
ನೋಂದಣಿಗೆ ಕೊನೆಯ ದಿನಾಂಕ ಸೆ 30.
ಆಸಕ್ತರು https://mysoredasara.gov.in ಜಾಲತಾಣದ ಮೂಲಕ ಆನ್‌ಲೈನ್‌ನಲ್ಲಿ ಅಥವಾ ಜಿಲ್ಲಾ ಪಂಚಾಯತ್ ಕಚೇರಿಯಿಂದ ಅರ್ಜಿ ಪಡೆದು ಸಲ್ಲಿಸಬಹುದಾಗಿದೆ.

