ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಆಯೋಜಿಸಿರುವ ಸೇವಾ ಸಪ್ತಾಹದ ಅಂಗವಾಗಿ ಮೈಸೂರು ನಗರ ಹಾಗೂ ಗ್ರಾಮಾಂತರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು.
ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸ್ಪರ್ಧೆಯಲ್ಲಿ ನೂರಾರು ಮಹಿಳಾ ಕಾರ್ಯಕರ್ತೆಯರು ಉತ್ಸಾಹದಿಂದ ಭಾಗವಹಿಸಿ, ರಂಗೋಲಿ ಮೂಲಕ ತಮ್ಮ ಕಲೆಯನ್ನು ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಮೈಸೂರು ನಗರಾಧ್ಯಕ್ಷ ನಾಗೇಂದ್ರ, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಬ್ಬಣ್ಣ, ನಗರ ಮತ್ತು ಗ್ರಾಮಾಂತರ ಮಹಿಳಾ ಮೋರ್ಚಾ ಅಧ್ಯಕ್ಷರಾದ ಮೋನಿಕಾ ಎಂ ಮತ್ತು ನಳಿನಿ, ಪ್ರಧಾನ ಕಾರ್ಯದರ್ಶಿಗಳಾದ ಕಾವೇರಿ, ರಶ್ಮಿ, ನಂದಿನಿ, ಸವಿತಾ ಚೌಹಾಣ್, ಲಕ್ಷ್ಮೀ ಕಿರಣ್, ಹೇಮಾ ನಂದೀಶ್, ಪ್ರಫುಲ್ಲ, ಶಾಂತಮ್ಮ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಹಾಗೂ ಮಂಡಲ ಮಟ್ಟದ ಪದಾಧಿಕಾರಿಗಳು, ಮಹಿಳಾ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

