ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿ ಉದ್ಘಾಟಿಸಲಿದ್ದಾರೆ.
ವಿಧಾನಸೌಧದಲ್ಲಿ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಅವರು ಇದನ್ನು ಪ್ರಕಟಿಸಿದರು.
ಅಕ್ಟೋಬರ್ 11 ರಿಂದ ಅಕ್ಟೋಬರ್ 21 ರವರೆಗೆ ಒಟ್ಟು 11 ದಿನಗಳ ಕಾಲ ಅತ್ಯಂತ ವೈಭವದಿಂದ ದಸರಾ ನಡೆಯಲಿದೆ.
ಅ. 11 ಭಾನುವಾರ ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ದೊರೆಯಲಿದೆ ಎಂದು ತಿಳಿಸಿದರು.
ಅ. 20 ರಂದು ಸಾಂಪ್ರದಾಯಿಕ ಆಯುಧ ಪೂಜೆ ನಡೆಯಲಿದ್ದು ಅ. 21 ಬುಧವಾರ ವಿಜಯದಶಮಿ ದಿನದಂದು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಮತ್ತು ಸಂಜೆ ಬನ್ನಿಮಂಟಪದಲ್ಲಿ ಪಂಜಿನ ಕವಾಯತು ನಡೆಯಲಿದೆ.
ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪ್ರಸ್ತುತ ಪೀಠಾಧಿಪತಿಗಳಾದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಮಠದ 18ನೇ ಪೀಠಾಧಿಪತಿಗಳಾಗಿದ್ದು, ಸಮಾಜದಲ್ಲಿ ತಮ್ಮ ಅಭೂತಪೂರ್ವ ಸಾಮಾಜಿಕ ಕಳಕಳಿ, ಸರಳತೆ ಮತ್ತು ದಾಸೋಹ ಪರಂಪರೆಯಿಂದಾಗಿ ನಾಡಿನಾದ್ಯಂತ ‘ನಡೆದಾಡುವ ದೇವರು’ ಹಾಗೂ ‘ಜಲಋಷಿ’ ಎಂದು ಗೌರವದಿಂದ ಕರೆಯಲಾಗುತ್ತದೆ.

