ಮೈಸೂರು: ಮೈಸೂರು ಅರಮನೆ ಆವರಣದಲ್ಲಿ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ನೇತೃತ್ವದಲ್ಲಿ ಮಾವುತರು ಮತ್ತು ಕಾವಾಡಿಗಳಿಗೆ ಆಯೋಜಿಸಿದ್ದ ಉಪಹಾರ ಕೂಟ ಮತ್ತು ಕಿಟ್ ವಿತರಣಾ ಕಾರ್ಯಕ್ರಮ ತಡವಾದುದಕ್ಕೆ ಶಾಸಕ ತನ್ವೀರ್ ಸೇಠ್ ಅಸಮಾಧಾನಗೊಂಡರು.
ಕಾರ್ಯಕ್ರಮ ಬೆಳಿಗ್ಗೆ 9 ಗಂಟೆಗೆ ನಿಗದಿಯಾಗಿತ್ತು,ಆದರೆ 9.30 ಆದರೂ ಆರಂಭವಾಗಲಿಲ್ಲ. ಇದರಿಂದ ಬೇಸರಗೊಂಡ ಶಾಸಕ ತನ್ವೀರ್ ಸೇಠ್ ಅವರು ಸ್ಥಳದಿಂದ ಹೊರನಡೆದರು
ಬೆಳಗ್ಗೆಯಿಂದ ಕಾಯುತ್ತಿದ್ದ ಮಾವುತರಿಗೆ ಗೌರವ ನೀಡಬೇಕು, ಸಮಯಕ್ಕೆ ಸರಿಯಾಗಿ ಉಪಹಾರ ನೀಡಬೇಕು, ಅವರನ್ನು ಊಟಕ್ಕಾಗಿ ಕಾಯಿಸುವುದು ಸರಿಯಲ್ಲ ಎಂದು ಶಾಸಕರು ಸರ್ಕಾರಿ ಅಧಿಕಾರಿಗಳಿಗೆ ಕಾರ್ಯಕ್ರಮವನ್ನು ತಕ್ಷಣ ಆರಂಭಿಸುವಂತೆ ಸೂಚಿಸಿದರು.
ಸಚಿವರ ಬಾರದ ಕಾರಣ ಅಧಿಕಾರಿಗಳು ಕಾರ್ಯಕ್ರಮ ಆರಂಭಿಸದಿದ್ದಾಗ ಅವರು ಅಸಮಾಧಾನಗೊಂಡು ತನ್ವೀರ್ ಸೇಠ್ ಕಾರಿನಲ್ಲಿ ವಾಪಸು ಹೊರಟು ಹೋದರು.

