ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ-2026 ಮಹೋತ್ಸವದ ಆಹ್ವಾನ ಪತ್ರಿಕೆಯನ್ನು ಸ್ವಾಗತ ಸಮಿತಿ ಸಿದ್ಧಪಡಿಸಿದ್ದು ವಿಶೇಷ ಪೂಜೆ ಸಲ್ಲಿಸಲಾಯಿತು.
ದಸರಾ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಲಿ ಎಂದು ಜಿಲ್ಲಾಡಳಿತ ಆಹ್ವಾನ ಪತ್ರಿಕೆಯೊಂದಿಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್, ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

