ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಡಾ: ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರು ಅರಮನೆಗೆ ಭೇಟಿ ನೀಡಿ ಮಹಾರಾಣಿ ಪ್ರಮೋದ ದೇವಿ ಹಾಗೂ ರಾಜಮನೆತನದ ಕುಟುಂಬದವರಿಗೆ
ಮೈಸೂರು ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಹ್ವಾನ ಪತ್ರಿಕೆ ನೀಡಿ ಮನವಿ ಮಾಡಿದರು.
ಈ ವೇಳೆ ಮಾತನಾಡಿದ ಸಚಿವರು ,ಪ್ರತಿ ಬಾರಿಯಂತೆ ಈ ಬಾರಿಯೂ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಾಜಮನೆತನದ ಮಹಾರಾಜರಿಗೆ ದಸರಾ ಮಹೋತ್ಸವಕ್ಕೆ ಅಧಿಕೃತವಾಗಿ ಆಹ್ವಾನ ನೀಡಿದ್ದಾಗಿ ತಿಳಿಸಿದರು.
ರಾಜಮನೆತನದವರು ದಸರಾ ಆಚರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ಅಂಬಾರಿ ಕಟ್ಟುವ ಸಮಯದಲ್ಲಿ ಕಳೆದ ಬಾರಿ ಹೆಚ್ಚಿನ ಜನಸಂದಣಿಯಿಂದ ವಿಳಂಬವಾಗಿದ್ದನ್ನು ನೆನಪಿಸಿ, ಈ ಬಾರಿ ಅಂಬಾರಿ ಕಟ್ಟುವ ಜಾಗದಲ್ಲಿ ಕಡಿಮೆ ಜನರಿಗೆ ಅವಕಾಶ ನೀಡಿ ಸುಸೂತ್ರವಾಗಿ ಕೆಲಸ ನಡೆಯುವಂತೆ ಸೂಕ್ತ ಸಲಹೆ ನೀಡಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀವತ್ಸ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಡಾ: ಪುಷ್ಪ ಅಮರನಾಥ್ ಮೈಸೂರು ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯುಬ್ ಖಾನ್,ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯುಕೇಶ್ ಕುಮಾರ್, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರರ ಜಿಲ್ಲಾಧಿಕಾರಿ ಐಶ್ವರ್ಯ ಆರ್, ಮೈಸೂರು ಮಹಾನಗರ ಪಾಲಿಕೆ ಕಾರ್ಯ ಪಾಲಕ ಅಭಿಯಂತರರಾದ ಸಿಂಧು ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು

