ನವದೆಹಲಿ: ಸಾಂವಿಧಾನಿಕ ಸರ್ಕಾರದ ಮುಖ್ಯಸ್ಥರಾಗಿ ಸತತ 25 ವರ್ಷಗಳ ಸುದೀರ್ಘ ಅಧಿಕಾರಾವಧಿಯನ್ನು ಪೂರೈಸಿದ ಐತಿಹಾಸಿಕ ಸಂದರ್ಭದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.
ಬುಧವಾರ ನವದೆಹಲಿಯ ಸರೋಜಿನಿ ನಗರದಲ್ಲಿರುವ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿದ ಪ್ರಧಾನಿ ಮೋದಿ ಅವರು ಗಣಪತಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಪೂಜೆಯ ನಂತರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, ದೇಶದ ಸಮಸ್ತ ಜನರ ಸುಖ, ಶಾಂತಿ, ಸಮೃದ್ಧಿ ಹಾಗೂ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದಾಗಿ ತಿಳಿಸಿದ್ದಾರೆ.
ವಿಘ್ನ ನಿವಾರಕ ನಾದ ಗಣೇಶನ ಆಶೀರ್ವಾದ ಸದಾ ಎಲ್ಲರ ಮೇಲಿರಲಿ, ಭಾರತವು ನಿರಂತರವಾಗಿ ಪ್ರಗತಿಯ ಹಾದಿಯಲ್ಲಿ ಮುನ್ನಡೆಯಲಿ ಎಂದು ಹಾರೈಸಿದರು.
ಇದೇ ವೇಳೆ, ದೇಶ ಸೇವೆಗೆ ತಮ್ಮನ್ನು ಮತ್ತಷ್ಟು ಅರ್ಪಿಸಿಕೊಳ್ಳುವುದಾಗಿ ಪ್ರಧಾನಿ ಸಂಕಲ್ಪ ಮಾಡಿದ್ದಾರೆ.

