ಖ್ಯಾತ ಹಿರಿಯ ನಟ ನಾನಾ ಪಾಟೇಕರ್ ವಿಧಿವಶ

ಪಣಜಿ: ಭಾರತೀಯ ಚಿತ್ರರಂಗದ ಖ್ಯಾತ ಹಿರಿಯ ನಟ ನಾನಾ ಪಾಟೇಕರ್ ಅವರು ಗುರುವಾರ ಬೆಳಿಗ್ಗೆ ತೀವ್ರ ಹೃದಯ ಸ್ತಂಭನದಿಂದ ವಿಧಿವಶರಾಗಿದ್ದಾರೆ.

ಗೋವಾದ ತಮ್ಮ ನಿವಾಸದಲ್ಲಿದ್ದಾಗ ಬೆಳಿಗ್ಗೆ ಸುಮಾರು 5.20ರ ಸುಮಾರಿಗೆ ನಾನಾ ಪಾಟೇಕರ್ ಅವರಿಗೆ ತೀವ್ರ ಹೃದಯ ಸ್ತಂಭನ ಉಂಟಾಗಿದೆ.

ತಕ್ಷಣ ವೈದ್ಯರು ಸತತ 45 ನಿಮಿಷಗಳ ಕಾಲ ನಿರಂತರವಾಗಿ ಸಿಪಿಆರ್ ಪ್ರಕ್ರಿಯೆ ನಡೆಸಿದ್ದಾರೆ,ಯಾವುದೇ ಯಾವುದೇ ಪ್ರಯೋಜನವಾಗಲಿಲ್ಲ,ಅವರು ಕೊನೆಯುಸಿರೆಳೆದಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆಯ ಆಂಕೊಲಾಜಿ ವಿಭಾಗದ ಮುಖ್ಯಸ್ಥ ಡಾ. ಶೇಖರ್ ಸಾಲ್ಕರ್ ತಿಳಿಸಿದ್ದಾರೆ

ಹಿಂದಿ ಹಾಗೂ ಮರಾಠಿ ಚಿತ್ರರಂಗದಲ್ಲಿ ದಶಕಗಳ ಕಾಲ ಸಕ್ರಿಯರಾಗಿದ್ದ ನಾನಾ ಪಾಟೇಕರ್, ತಮ್ಮ ವಿಶಿಷ್ಟ ಸಂಭಾಷಣೆ ಶೈಲಿ ಹಾಗೂ ವಿಶೇಷ ನಟನೆಯಿಂದ ಅಪಾರ ಅಭಿಮಾನಿ ಬಳಗವನ್ನು ಸಂಪಾದಿಸಿದ್ದರು.

ಪರಿಂದಾ, ಕ್ರಾಂತಿವೀರ್,ಅಗ್ನಿಸಾಕ್ಷಿ, ತಿರಂಗಾ, ‘ವೆಲ್‌ಕಮ್’, ‘ನಟಸಾಮ್ರಾಟ್’ ಸೇರಿದಂತೆ ಹಲವು ಸಾರ್ವಕಾಲಿಕ ಹಿಟ್ ಚಿತ್ರಗಳಲ್ಲಿ ಅವಿಸ್ಮರಣೀಯ ಪಾತ್ರಗಳನ್ನು ನಿರ್ವಹಿಸಿದ್ದರು. ಅತ್ಯುತ್ತಮ ನಟನೆಗಾಗಿ ಅವರು ಮೂರು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ.

ನಟ ಮಕರಂದ್ ಅನಾಸ್ಪುರೆ ಅವರೊಂದಿಗೆ ‘ನಾಮ್ ಫೌಂಡೇಶನ್’ ಸ್ಥಾಪಿಸಿ, ವಿಶೇಷವಾಗಿ ಮಹಾರಾಷ್ಟ್ರದ ಬರಪೀಡಿತ ರೈತರು ಮತ್ತು ಅವರ ಕುಟುಂಬಗಳಿಗೆ ನೆರವು ನೀಡುವ ಕಾರ್ಯದಲ್ಲಿ ನಾನಾ ತೊಡಗಿದ್ದರು ಪ್ರಹಾರ್: ದಿ ಫೈನಲ್ ಅಟ್ಯಾಕ್ ಚಿತ್ರದ ಮೂಲಕ ನಿರ್ದೇಶಕರಾಗಿಯೂ ಗುರುತಿಸಿಕೊಂಡಿದ್ದರು.

2010ರಲ್ಲಿ ತೆರೆಕಂಡ ಲೂಸ್ ಮಾದ ಯೋಗೇಶ್ ನಟನೆಯ ಯಕ್ಷ ಆಕ್ಷನ್ ಕ್ರೈಮ್ ಚಿತ್ರದ ಮೂಲಕ ಅವರು ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು.ಈ ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ನಾನಾ ಪಾಟೇಕರ್ ಅವರು ಯೋಗರಾಜ್ ಪುಲಕೇಶ್ ಎಂಬ ಖಡಕ್ ಮತ್ತು ಪ್ರಾಮಾಣಿಕ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಕನ್ನಡದ ‘ಯಕ್ಷ’ ಚಿತ್ರಕ್ಕೆ ಅವರೇ ಸ್ವತಃ ಡಬ್ ಮಾಡಿದ್ದು ವಿಶೇಷ. ಶೂಟಿಂಗ್ ವೇಳೆ ತಮ್ಮ ಸಂಭಾಷಣೆಗಳನ್ನು ಮರಾಠಿ ಅಥವಾ ಹಿಂದಿಯಲ್ಲಿ ಬರೆದುಕೊಂಡು, ಸ್ಪಷ್ಟವಾಗಿ ಕನ್ನಡದಲ್ಲಿ ಉಚ್ಚರಿಸುತ್ತಿದ್ದರು.