ಮೈಸೂರು: ನಗರದ ಸ್ಕೌಟ್ಸ್ ಅಂಡ್ ಗೈಡ್ಸ್ ಆವರಣದಲ್ಲಿ ನಡೆಯುತ್ತಿರುವ ದಸರಾ ಪುಸ್ತಕ ಮೇಳಕ್ಕೆ ಆಗಮಿಸಿದ ನಾಡಹಬ್ಬ ದಸರಾ ಉದ್ಘಾಟಕರಾದ ಕೊಪ್ಪಳದ ಗವಿಮಠದ ಅಭಿನವ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ ಅವರಿಗೆ ಲಕ್ಷ್ಮೀಪುರಂ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ರವಿಶಂಕರ್ ಅವರು ಸಚಿತ್ರ ರಾಮಾಯಣ ಪುಸ್ತಕ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಕೆ.ಆರ್. ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ, ಮಾಜಿ ನಗರಪಾಲಿಕೆ ಸದಸ್ಯರಾದ ಎಂ.ಡಿ. ಪಾರ್ಥಸಾರಥಿ, ಜಗದೀಶ್, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಹಾಗೂ ಲಕ್ಷ್ಮೀಪುರಂ ಪೊಲೀಸ್ ಠಾಣೆಯ ಸಿಬ್ಬಂದಿಗಳು ಹಾಜರಿದ್ದರು.

