ದಸರಾ ಮಹೋತ್ಸವ ದಲ್ಲಿ ಮಹಿಳೆಯರು- ಮಕ್ಕಳ ರಕ್ಷಣೆಗೆ 4 ಅಕ್ಕ ಪಡೆ ರೆಡಿ

ಮೈಸೂರು: 2026ನೇ ಸಾಲಿನ ದಸರಾ ಮಹೋತ್ಸವದಲ್ಲಿ ಮಹಿಳೆಯರು ಮತ್ತು ಮಕ್ಕಳ ಭದ್ರತೆ ಹಾಗೂ ಸುರಕ್ಷತೆಗಾಗಿ ಅ.11 ರಿಂದ 21‌ ರವರೆಗೆ ವಿಶೇಷವಾಗಿ ಕಾರ್ಯ ನಿರ್ವಹಿಸಲು ವಾಹನ ಸಮೇತ 4 ಅಕ್ಕ ಪಡೆಗಳನ್ನು ನಿಯೋಜಿಸಲಾಗಿದೆ.

ಅಕ್ಕ ಪಡೆಗೆ ಒಟ್ಟು 32 ಮಹಿಳಾ ಪೊಲೀಸ್ ಸಿಬ್ಬಂದಿ/ ಮಹಿಳಾ ಹೋಂ ಗಾರ್ಡ್‌ಗಳನ್ನು ನಿಯೋಜಿಸಿದ್ದು, 2 ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿವೆ.

ಅಕ್ಕ ಪಡೆಯು ದಸರಾ ಮಹೋತ್ಸವ ನಡೆಯುವ ಎಲ್ಲಾ ಕಾರ್ಯಕ್ರಮಗಳ ಸ್ಥಳಗಳು, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ ಹಾಗೂ ಇತರೇ ಮಹಿಳೆಯರು ಹೆಚ್ಚು ಸೇರುವ ಸ್ಥಳಗಳಲ್ಲಿ ಗಸ್ತು ಮಾಡಿ ಮಹಿಳೆಯರು ಮತ್ತು ಮಕ್ಕಳ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಲಿ ದ್ದಾರೆ. ಹಾಗೂ ಅಕ್ಕ ಪಡೆಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ದಸರಾ ಮಹೋತ್ಸವದ ಸಮಯ ದಲ್ಲಿ ತೆಗೆದುಕೊಳ್ಳಬೇಕಾದ ಸುರಕ್ಷತೆಯ ಕ್ರಮಗಳ ಬಗ್ಗೆ ತಿಳಿವಳಿಕೆ ನೀಡಲಾಗುತ್ತಿದೆ.

ಮಹಿಳಾ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟ‌ರ್ ಅವರನ್ನು ಅಕ್ಕ ಪಡೆಯ ಉಸ್ತುವಾರಿ ಅಧಿಕಾರಿಯಾಗಿ ನೇಮಕ ಮಾಡಲಾಗಿದ್ದು,ಅವರು ಅಕ್ಕ ಪಡೆ ಹಾಗೂ ನಗರ ನಿಸ್ತಂತು ಕೊಠಡಿಯ ಸಮನ್ವಯದೊಂದಿಗೆ ದಸರಾ ಮಹೋತ್ಸವದ ಸಮಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯ ಕರ್ತವ್ಯ ನಿರ್ವಹಿಸುತ್ತಿ ದ್ದಾರೆ.