ಸಚಿವನಾಗುವುದಕ್ಕೆ ಯಾರದ್ದೋ ಕಾಲು, ತಲೆ ಹಿಡಿಯುವ ಕೆಲಸ ಮಾಡಿಲ್ಲ -ಯತ್ನಾಳ್

ಬೆಂಗಳೂರು: ಸಚಿವನಾಗುವುದಕ್ಕೆ ಯಾರದ್ದೋ ಕಾಲು, ತಲೆ ಹಿಡಿಯುವ ಕೆಲಸ ಮಾಡಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬುಧವಾರ ಟ್ವೀಟ್ ಮಾಡಿದ್ದಾರೆ
ಕರ್ನಾಟಕದ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಆತ್ಮಸಾಕ್ಷಿಯಾಗಿ ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದೇನೆ ಹೊರತು ಸಚಿವನಾಗುವುದಕ್ಕೆ ಯಾರದ್ದೋ ಕಾಲು ಹಿಡಿದು ತಲೆ ಹಿಡಿಯುವ ಕೆಲಸ ಮಾಡಿಲ್ಲ. ಅದು ನನ್ನ ಜಾಯಮಾನವೂ ಅಲ್ಲ ಎಂದು ಟ್ವಿಟ್‍ನಲ್ಲಿ ಯತ್ನಾಳ್ ಬರೆದುಕೊಂಡಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಬಹಳ ದಿನ ಉಳಿಯಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದರು.
ಈ ಬಗ್ಗೆ ಯತ್ನಾಳ್ ಜೊತೆ ಮಾತನಾಡುತ್ತೇನೆ ಎಂದು ಸಿಎಂ ತಿಳಿಸಿದ್ದರು.
ಇದೀಗ ಯತ್ನಾಳ್ ರ ಈ ಟ್ವೀಟ್ ಕುರಿತು ಸಾಕಷ್ಟು ಚರ್ಚೆಯಾಗುತ್ತಿದೆ.