ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಹಣ ಬಲದಿಂದ ಬಿಜೆಪಿ ಗೆಲ್ಲಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಮಾಧ್ಯಮ ಪ್ರತಿನಿಧಿಗಳೊಂದಿಹೆ ಹೆಚ್ ಡಿಕೆ ಬುಧವಾರ ಮಾತನಾಡಿದರು.
ಆರ್.ಆರ್.ನಗರ ಮತ್ತು ಶಿರಾ ಕ್ಷೇತ್ರದ ಉಪಚುನಾವಣೆಯಲ್ಲಿ ಹಣ ಬಲದ ಮೂಲಕ ಗೆಲುವು ಸಾಧಿಸಲು ಬಿಜೆಪಿ ಹೊರಟಿದೆ. ಆದರೆ ಶಿರಾದಲ್ಲಿ ಹಣ ಬಲದಿಂದ ಗೆಲ್ಲಲು ಆಗಲ್ಲ. ಹಣಬಲದಿಂದ ಗೆಲ್ಲುತ್ತೇವೆ ಅನ್ನೋದು ಭ್ರಮೆ ಎಂದರು. ಕೆ.ಆರ್.ಪೇಟೆಯಲ್ಲಿ ಕಮಲ ಅರಳಿಸಿದಂತೆ ಶಿರಾದಲ್ಲಿ ಕಮಲ ಅರಳಿಸಲು ಆಗಲ್ಲ. ಅಂದಿನ ಚುನಾವಣೆಗೂ ಇಂದಿನ ಚುನಾವಣೆಗೂ ವ್ಯತ್ಯಾಸವಿದೆ ಎಂದು ಅವರು ಹೇಳಿದರು.
ನನಗೆಅಧಿಕಾರ ಇಲ್ಲದಿದ್ದರೂ ಜನ ನಮ್ಮ ಮನೆಗೆ ಬರುತ್ತಾರೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಎಷ್ಟು ಬಡವರಿಗೆ ಸಹಾಯ ಮಾಡಿದ್ದಾರೆ ಎಂದು ಹೆಚ್.ಡಿಕೆ ಪ್ರಶ್ನಿಸಿದರು.
ಹಣಬಲದಿಂದ ಗೆಲ್ಲಲು ಸಾಧ್ಯವಿಲ್ಲ -ಹೆಚ್ ಡಿಕೆ

