ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ -ನಳಿನ್ ಕುಮಾರ್ ಕಟೀಲ್

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಈ ಕುರಿತು ಕಟೀಲ್ ಅವರು ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ ಸಿಎಂ ಬದಲಾವಣೆ ಇಲ್ಲ. ಬಿ.ಎಸ್. ಯಡಿಯೂರಪ್ಪನವರೇ ಮುಂದಿನ ಮೂರು ವರ್ಷಗಳ ಕಾಲ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದಿದ್ದಾರೆ.
ಅಶಿಸ್ತು ಪ್ರದರ್ಶಿಸುವವರ ವಿರುದ್ಧ ಶಿಸ್ತುಕ್ರಮ ಜರುಗಿಸುತ್ತೇವೆ ಎಂದು ಯತ್ನಾಳ್ ಅವರಿಗೆ ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲಾ ಒಂದು ರೀತಿಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿದ್ದಾರೆ.
ಬಿಎಸ್‍ವೈ ಹೆಚ್ಚು ದಿನ ಅಧಿಕಾರಿದಲ್ಲಿ ಮುಂದುವರೆಯುವುದಿಲ್ಲ ಎಂದು ಯತ್ನಾಳ್ ಹೇಳಿದ್ದರು. ಬುಧವಾರ ಸಹ ಸಾಮಾಜಿಕ ಜಾಲತಾಣದಲ್ಲಿ ಬಿಎಸ್‍ವೈ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿ ನಾಯಕರಿಗೆ ಈ ವಿಚಾರ ಇರಿಸು ಮುರಿಸಿಗೆ ಕಾರಣವಾಗಿದೆ.