ಜನರಲ್ಲಿ ಕೇಂದ್ರ ಸರ್ಕಾರದ ಬಗ್ಗೆ ಇರುವ ಆಶಾ ಭಾವನೆ ಹೋಗಿದೆ -ಹೆಚ್.ಕೆ. ಪಾಟೀಲ್

ಹುಬ್ಬಳ್ಳಿ: ಜನರಲ್ಲಿ ಕೇಂದ್ರ ಸರ್ಕಾರದ ಬಗ್ಗೆ ಇರುವ ಆಶಾ ಭಾವನೆ ಹೋಗಿದೆ ಎಂದು ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಹೇಳಿದರು.
ನಗರದಲ್ಲಿ ಹೆಚ್. ಕೆ. ಪಾಟೀಲ್ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.
ಕೇಂದ್ರ ಸರ್ಕಾರದ ಹುಸಿ ಭರವಸೆಗಳು ಜನಸಾಮಾನ್ಯರಲ್ಲಿ ಬೇಸರ ತರಿಸಿದೆ ಎಂದು ಅವರು ತಿಳಿಸಿದರು.
ದೇಶದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ದೂರಿದ ಅವರು ಕಾಂಗ್ರೆಸ್ ಪಕ್ಷದ ಬಗ್ಗೆ ಜನತೆಯಲ್ಲಿ ಒಲವು ಜಾಸ್ತಿಯಾಗುತ್ತಿದೆ ಎಂದು ಹೇಳಿದರು.
ಕೃಷ್ಣಾ ನದಿ ಜಲ ವಿವಾದ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಲಂಗಾಣದ ಬಗ್ಗೆ ತೋರುತ್ತಿರುವ ಮೃದು ಧೋರಣೆ ಸರಿಯಲ್ಲ.
ಇದು ಮುಂದುವರೆದರೆ ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ಬಹುದೊಡ್ಡ ಗಂಡಾಂತರ ಎದುರಿಸಬೇಕಾಗುತ್ತದೆ ಎಂದು ಹೆಚ್. ಕೆ. ಪಾಟೀಲ್ ಎಚ್ಚರಿಸಿದರು.
ರಾಜ್ಯದಲ್ಲಿ ಪ್ರವಾಹದಿಂದ ಸಾಕಷ್ಟು ಹಾನಿಯಾಗಿದೆ. ರಾಜ್ಯದ ಅನೇಕ ಕುಟುಂಬಗಳಿಗೆ ಇನ್ನೂ ಸಮರ್ಪಕ ಪರಿಹಾರವನ್ನು ರಾಜ್ಯ ಬಿಜೆಪಿ ಸರಕಾರ ಒದಗಿಸಿಲ್ಲ ಎಂದರು.
ಮುಂಬೈ ಹಾಗೂ ಕಲ್ಯಾಣ ಕರ್ನಾಟಕ ಭಾಗದ ರೈತರ ಬದುಕು ಅಸ್ತವ್ಯಸ್ತವಾಗಿದೆ. ಸರ್ಕಾರ ಶೀಘ್ರವೇ ಸಮರ್ಪಕ ಪರಿಹಾರವನ್ನ ಬಿಡುಗಡೆಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
ಇದೇ 28ರಂದು ನಡೆಯಲಿರುವ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಆರ್.ಎಂ ಕುಬೇರಪ್ಪ ಅವರು ಸ್ಪರ್ಧಿಸುತ್ತಿದಾರೆ. ಅವರು ಗೆಲುವು ಸಾಧಿಸಲಿದ್ದಾರೆ ಎಂದರು.