ನ. 17ರಿಂದ ಕಾಲೇಜುಗಳು ಪುನರಾರಂಭ -ಸಚಿವ ಅಶ್ವಥ್ ನಾರಾಯಣ್

ಬೆಂಗಳೂರು: ಶಾಲಾ-ಕಾಲೇಜುಗಳ ಪುನರಾರಂಭದ ಬಗ್ಗೆ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಕಾಲೇಜುಗಳ ಪುನರಾರಂಭದ ದಿನಾಂಕ ಘೋಷಿಸಿದೆ.
ನ. 17ರಿಂದ ಕಾಲೇಜುಗಳು ಆರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
ಕರ್ನಾಟಕದ ಎಲ್ಲ ಡಿಗ್ರಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳನ್ನು ನ. 17ರಿಂದ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ಶುಕ್ರವಾರ ರಾಜ್ಯದಲ್ಲಿ ಕಾಲೇಜು ಆರಂಭಿಸುವ ವಿಚಾರವಾಗಿ ಸಭೆ ನಡೆಸಲಾಯಿತು.
ಆನಂತರ ಮಾಧ್ಯಮ ಪ್ರತಿನಿಧೀಗಳಿಗೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಮಾಹಿತಿ ನೀಡಿದರು.
ಪ್ರಥಮವಾಗಿ ಡಿಗ್ರಿ ಕಾಲೇಜುಗಳನ್ನು ಆರಂಭಿಸಲಾಗುವುದೆಂದು ತಿಳಿಸಿದರು.
ನ. 17ರಿಂದ ಇಂಜಿನಿಯರಿಂಗ್, ಪದವಿ, ಡಿಪೆÇ್ಲಮಾ ಕಾಲೇಜುಗಳು ಆರಂಭಿಸಲಾಗುತ್ತದೆಂದರು.
ಲಾಕ್‍ಡೌನ್‍ನಿಂದ ಮಾರ್ಚ್ ತಿಂಗಳ ಅಂತ್ಯದಿಂದ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿತ್ತು. ಬಳಿಕ ಆನ್ ಲೈನ್‍ನಲ್ಲಿ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸಲಾಗಿತ್ತು. ನ. 17ರಿಂದ ಕಾಲೇಜುಗಳ ಆರಂಭಕ್ಕೆ ತೀರ್ಮಾನಿಸಲಾಗಿದೆ.