ಆರ್.ಆರ್ ನಗರ ಗೆಲ್ಲಲು ಡಿಕೆಶಿ ಗೂಂಡಾಗಿರಿ ಮೂಲಕ ಯತ್ನ -ಶೋಭಾ ಕರಂದ್ಲಾಜೆ

ಮೈಸೂರು: ಆರ್.ಆರ್ ನಗರ ಉಪಚುನಾವಣೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆಶಿವಕುಮಾರ್ ಗೂಂಡಾಗಿರಿ ಮೂಲಕ ಗೆಲ್ಲಲು ಮುಂದಾಗಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪ ಮಾಡಿದರು.
ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಶೋಭಾ ಕರಂದ್ಲಾಜೆ ಅವರು ಮಾತನಾಡಿದರು.
ಡಿಕೆ ಶಿವಕುಮಾರ್ ಕಾನೂನು ಸುವ್ಯವಸ್ಥೆ ಹದಗೆಡಿಸಲು ಯತ್ನಿಸುತ್ತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.
ಡಿ.ಕೆ ಶಿವಕುಮಾರ್ ಗೂಂಡಾ ರಾಜಕಾರಣಿ. ಗೂಂಡಾಗಿರಿ ಮೂಲಕ ಆರ್.ಆರ್ ನಗರ ಗೆಲ್ಲಲು ಡಿಕೆ ಶಿವಕುಮಾರ್ ಯತ್ನಿಸುತ್ತಿದ್ದಾರೆಂದರು.
ಚುನಾವಣೆ ಪಾರದರ್ಶಕವಾಗಿ ನಡೆಯಬೇಕು. ಯಾವುದೇ ಅಕ್ರಮ ನಡೆಯಲು ಅವಕಾಶ ನೀಡಬಾರದು ಎಂದು ಶೋಭಾಕರಂದ್ಲಾಜೆ ತಿಳಿಸಿದರು.