ಬೆಂಗಳೂರು: ನಗರದಲ್ಲಿ ಮಳೆಯಿಂದ ಹಾನಿಗೊಳಗಾದ ಕುಟುಂಬಕ್ಕೆ ತಲಾ 25 ಸಾವಿರ ರೂ. ಪರಿಹಾರವನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ಸಿಎಂ ಬಿಎಸ್ ಯಡಿಯೂರಪ್ಪ ಅವರು ಶನಿವಾರ ಮಧ್ಯಾಹ್ನ ಹೊಸಕೆರೆ ಹಳ್ಳಿ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ಮಳೆಯಿಂದಾಗಿ ಬೆಂಗಳೂರು ತತ್ತರಿಸಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಈ ಹಿನ್ನೆಲೆ ಮಳೆ ಹಾನಿಗೊಳಗಾದ ಕುಟುಂಬಕ್ಕೆ ತಲಾ 25 ಸಾವಿರ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದರು.
ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಲಾ 25 ಸಾವಿರ ರೂ ಪರಿಹಾರ ನೀಡುತ್ತೇವೆ. ಚೆಕ್ ಮೂಲಕ ಪರಿಹಾರ ನೀಡುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

