ರಾಜ್ಯದಲ್ಲಿ 2021ರ ಆರಂಭದಲ್ಲಿ ಕೊರೊನಾ ಲಸಿಕೆ ಸಿಗುವ ಸಾಧ್ಯತೆ- ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: 2021ರ ಆರಂಭದಲ್ಲಿಯೇ ಕೊರೊನಾ ವೈರಸ್ ಲಸಿಕೆ ಸಿಗುವ ಸಾಧ್ಯತೆ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ನಗರದಲ್ಲಿ ಮಂಗಳವಾರ ಸಚಿವ ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಈ ಹಿನ್ನೆಲೆಯಲ್ಲಿ ಲಸಿಕೆ ಹಂಚಿಕೆ ಮಾಡಲು ಸಿದ್ಧತೆ ನಡೆಸಿದ್ದೇವೆ ಎಂದು ಸಚಿವರು ತಿಳಿಸಿದರು.
ಅಸ್ಟ್ರಾಜನಿಕಾ ಸಂಸ್ಥೆ ಎಂಡಿ ಗಗನ್ ದೀಪ್ ಸೇರಿದಂತೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಅಕ್ಸಫರ್ಡ್ ವಿವಿ ಲಸಿಕೆ ಪ್ರಯೋಗ ಮೊದಲ ಹಂತ ಮುಕ್ತಾಯವಾಗಿದೆ. 2021 ಆರಂಭದಲ್ಲೇ ರಾಜ್ಯದ ಜನತೆಗೆ ಕೋವಿಡ್ ಲಸಿಕೆ ಸಿಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು.