ಸಾಲ ಜನರ ಕಣ್ಣೀರು ಒರೆಸಬೇಕಲ್ಲದೇ ಭ್ರಷ್ಟಾಚಾರಕ್ಕೆ ಬಳಕೆಯಾಗಬಾರದು -ಸಿದ್ದರಾಮಯ್ಯ

ಬೆಂಗಳೂರು: ಸಾಲ ಜನರ ಕಣ್ಣೀರು ಒರೆಸಬೇಕಲ್ಲದೇ ಭ್ರಷ್ಟಾಚಾರಕ್ಕೆ ಬಳಕೆಯಾಗಬಾರದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಜನರ ಸಂಕಷ್ಟ ಪರಿಹರಿಸಲು ಬಳಕೆಯಾಗದ ಸಾಲವನ್ನು ರಾಜ್ಯದ ಜನ ಸಹಿಸುವುದಿಲ್ಲ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಜನರ ಸಂಕಷ್ಟ ಪರಿಹರಿಸಲು ಬಳಕೆಯಾಗದ ಸಾಲವನ್ನು ರಾಜ್ಯದ ಜನ ಸಹಿಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಸರ್ಕಾರವು ಸುಮಾರು 90 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಸಾಲ ಮಾಡುತ್ತಿದೆ. ಎಂದವರು ತಿಳಿಸಿದ್ದಾರೆ.
ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಭಾಗಗಳಲ್ಲಿ ಬೆಳೆದ ಬಹುಪಾಲು ಬೆಳೆಗಳು ಹಾನಿಗೊಳಗಾಗಿವೆ. ಜಿಲ್ಲಾಡಳಿತ ಸಂಪೂರ್ಣವಾಗಿ ಸಮೀಕ್ಷೆಯನ್ನೇ ಮಾಡಿಲ್ಲ. ಸರ್ಕಾರದ ಸಚಿವರುಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಂಪೂರ್ಣ ನಿರ್ಲಕ್ಷಿಸಿದ ಮೇಲೆ ತಹಶೀಲ್ದಾರ್, ಡಿ.ಸಿ.ಗಳು ಎಷ್ಟರ ಮಟ್ಟಿಗೆ ಜನರ ಜೊತೆ ನಿಲ್ಲಲು ಸಾಧ್ಯ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಪರಿಸ್ಥಿತಿಯನ್ನು ಚರ್ಚಿಸಲು ತಕ್ಷಣ ವಿಧಾನ ಮಂಡಲದ ಅಧಿವೇಶನ ಕರೆಯಬೇಕು. ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿ ತಿಳಿಸಿದ್ದಾರೆ.