ಬೆಂಗಳೂರು: ಉಪ ಚುನಾವಣೆಯಲ್ಲಿ ಮುನಿರತ್ನ ಗೆಲ್ಲುತ್ತಿದ್ದಂತೆಯೇ ಅವರಿಗೆ ಸಚಿವ ಸ್ಥಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸಿಎಂ ಮಾಧ್ಯಮ ಪ್ರತಿನಿಧೀಗಳೊಂದಿಗೆ ಶನಿವಾರ ಮಾತನಾಡಿದರು.
ಉಪ ಚುನಾವಣೆಯಲ್ಲಿ ಮುನಿರತ್ನ ಗೆದ್ದೇ ಗೆಲ್ಲುತ್ತಾರೆ. ಅವರು ಗೆದ್ದುಬಂದ ಕೂಡಲೇ ಸಚಿವ ಸ್ಥಾನ ನೀಡಲಾಗುವುದು ಎಂದು ಬಿಎಸ್ ವೈ ಹೇಳಿದರು.
ಈ ಚುನಾವಣೆ ಮುಗಿದ ಕೂಡಲೇ ದೆಹಲಿಗೆ ಹೋಗುತ್ತೇನೆ. ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಯ ಬಗ್ಗೆ ವರಿಷ್ಠರ ಜತೆ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಇನ್ನು ಮತದಾನಕ್ಕೆ ಮೂರೇ ದಿನ ಉಳಿದಿದ್ದು, ಬಹಿರಂಗ ಪ್ರಚಾರಕ್ಕೆ ಇಂದು ಕಡೆ ದಿನ. ರಾಜೇರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮುನಿರತ್ನ ಪರ ಪ್ರಚಾರ ಕೈಗೊಂಡಿದ್ದಾರೆ.

